Home ಟಾಪ್ ಸುದ್ದಿಗಳು ಹಿಮಾಚಲ ಪ್ರದೇಶ: ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ಬಿಜೆಪಿ ಶಾಸಕರು

ಹಿಮಾಚಲ ಪ್ರದೇಶ: ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ಬಿಜೆಪಿ ಶಾಸಕರು

ಶಿಮ್ಲಾ: ಜೈರಾಮ್ ಠಾಕೂರ್ ನೇತೃತ್ವದ ಹಿಮಾಚಲಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ಸದಸ್ಯರು ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರನ್ನು ಭೇಟಿಯಾಗಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸುಖ್ವಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಇನ್ನಿತರ ಬಿಜೆಪಿ ಶಾಸಕರು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿದರು.

ಹಿಮಾಚಲ ಪ್ರದೇಶ ವಿಧಾನಸಭೆಯಿಂದ ರಾಜ್ಯ ಸಭೆಯ ಏಕೈಕ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಅಡ್ಡ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಕಾರಣರಾಗಿದ್ದರು. ಬಿಜೆಪಿ ಗೆಲುವು ಸಾಧಿಸಿದ ಮರು ದಿನ ಈ ಬೆಳವಣಿಗೆ ನಡೆದಿದೆ.

68 ಸದಸ್ಯ ಬಲದ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ನ 40, ಬಿಜೆಪಿಯ 25 ಶಾಸಕರಿದ್ದಾರೆ. ಉಳಿದ 3 ಕ್ಷೇತ್ರಗಳಲ್ಲಿ ಪಕ್ಷೇತರ ಶಾಸಕರಿದ್ದಾರೆ.

Join Whatsapp
Exit mobile version