Home ಟಾಪ್ ಸುದ್ದಿಗಳು ಹಿಮಾಚಲ ಪ್ರದೇಶ ಚುನಾವಣೆ: ಮೋದಿ ಕಾಲ್’ಗೆ ಕ್ಯಾರೇ ಎನ್ನದ ಬಿಜೆಪಿ ಬಂಡಾಯ ಅಭ್ಯರ್ಥಿ; ನಾಮಪತ್ರ ಹಿಂಪಡೆಯಲು...

ಹಿಮಾಚಲ ಪ್ರದೇಶ ಚುನಾವಣೆ: ಮೋದಿ ಕಾಲ್’ಗೆ ಕ್ಯಾರೇ ಎನ್ನದ ಬಿಜೆಪಿ ಬಂಡಾಯ ಅಭ್ಯರ್ಥಿ; ನಾಮಪತ್ರ ಹಿಂಪಡೆಯಲು ನಕಾರ

ಶಿಮ್ಲಾ: ಹಿಮಾಚಲ ಪ್ರದೇಶ ಅಸೆಂಬ್ಲಿ‌ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯ ಬಿಜೆಪಿ ಮುಖಂಡ ಕೃಪಾಲ್ ಪಾರ್ಮರ್, ಪ್ರಧಾನಿ ಮೋದಿಯವರ ಒತ್ತಡಕ್ಕೂ ಮಣಿಯದೇ ಸ್ಪರ್ಧಾ ಕಣದಲ್ಲಿ ಮುಂದುವರಿದಿದ್ದಾರೆ. ಸ್ವತಃ ಪ್ರಧಾನಿ ಮೋದಿಯವರು ಕೃಪಾಲ್ ಅವರಿಗೆ ಕರೆ ಮಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿ ಒತ್ತಡ ಹಾಕಿದ್ದರು. ಆದರೆ ಸ್ಪರ್ಧಾ ಕಣದಿಂದ ಹಿಂದೆ ಸರಿಯಲು ಕೃಪಾಲ್ ನಿರಾಕರಿಸಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸದಂತೆ ಮನವೊಲಿಸಿ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಪ್ರಧಾನಿ ಮೋದಿ ಬಿಜೆಪಿ ಮುಖಂಡ ಕೃಪಾಲ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಇಬ್ಬರ ಮಾತುಕತೆಯ ಆಡಿಯೋ ವೈರಲ್ ಆಗಿದೆ. ಪ್ರಧಾನಿಯ ಮನವಿಗೆ ಕಿಂಚಿತ್ತೂ ಕಿವಿಕೊಡದ ಬಂಡಾಯ ಮುಖಂಡ ಕೃಪಾಲ್ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ್ದರಿಂದ ಬಿಜೆಪಿ ಪೇಚಿಗೆ ಸಿಲುಕಿದೆ.

ಮಾಜಿ ಸಂಸದ, ಬಿಜೆಪಿಯ ಬಂಡಾಯ ಅಭ್ಯರ್ಥಿ ಕೃಪಾಲ್ ಅವರು ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಫತೇಪುರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಟಿಕೆಟ್ ವಂಚಿತರಾದ ಅವರು ಬಿಜೆಪಿ ವಿರುದ್ಧ ಕೋಪಗೊಂಡಿದ್ದರು. ಈ ಮಧ್ಯೆ ಪ್ರಸಕ್ತ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿಯೂ ಕೃಪಾಲ್ ಅವರನ್ನು ಬಿಜೆಪಿ ಕಡೆಗಣಿಸಿತ್ತು.

ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಕೃಪಾಲ್, ಈ ಚುನಾವಣೆಯಲ್ಲಿ ನನ್ನ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಧ್ಯೆ ನೇರಾ ಹಣಾಹಣಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version