ಹಿಮಾಚಲ ಪ್ರದೇಶ: ಭಾರೀ ಮಳೆಗೆ ಕುಸಿದ ಸೇತುವೆ; ಅಪಾರ ಪ್ರಮಾಣದ ಹಾನಿ

Prasthutha|

ಶಿಮ್ಲಾ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಚಕ್ಕಿ ಸೇತುವೆ ಶನಿವಾರ ಕುಸಿದಿದ್ದು, ವಾಹನಗಳಿಗೆ ಮತ್ತು  ಸ್ಥಳೀಯ ನಿವಾಸಿಗಳಿಗೆ ಅಪಾರ ಹಾನಿಯುಂಟಾಗಿದೆ  ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾಹಿತಿ ನೀಡಿದ್ದಾರೆ.

- Advertisement -

ಇಂದು ಬೆಳಿಗ್ಗೆ ರಾಜ್ಯದ ಮಂಡಿ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಇದರಿಂದ ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ. ಸ್ಥಳೀಯ ನಿವಾಸಿಗಳುಪರದಾಡುವಂತಾಗಿದ್ದು,  ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ಜಿಲ್ಲೆಯ ಬಲ್ಹ್, ಸದರ್, ತುನಾಗ್, ಮಂಡಿ ಮತ್ತು ಇತರ ಸ್ಥಳಗಳ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp