ಶಿಮ್ಲಾ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಚಕ್ಕಿ ಸೇತುವೆ ಶನಿವಾರ ಕುಸಿದಿದ್ದು, ವಾಹನಗಳಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಅಪಾರ ಹಾನಿಯುಂಟಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾಹಿತಿ ನೀಡಿದ್ದಾರೆ.
ಇಂದು ಬೆಳಿಗ್ಗೆ ರಾಜ್ಯದ ಮಂಡಿ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಇದರಿಂದ ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ. ಸ್ಥಳೀಯ ನಿವಾಸಿಗಳುಪರದಾಡುವಂತಾಗಿದ್ದು, ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ಜಿಲ್ಲೆಯ ಬಲ್ಹ್, ಸದರ್, ತುನಾಗ್, ಮಂಡಿ ಮತ್ತು ಇತರ ಸ್ಥಳಗಳ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.