Home ಟಾಪ್ ಸುದ್ದಿಗಳು ಹಿಮಾಚಲ ಪ್ರದೇಶ ಉಪ ಚುನಾವಣೆ: ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಬಿಜೆಪಿ ಹೀನಾಯ ಸೋಲು

ಹಿಮಾಚಲ ಪ್ರದೇಶ ಉಪ ಚುನಾವಣೆ: ನಾಲ್ಕು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಬಿಜೆಪಿ ಹೀನಾಯ ಸೋಲು

►ಬೆಲೆ ಏರಿಕೆ ಉಡುಗೊರೆ ಕೊಟ್ಟಿದ್ದ ಬಿಜೆಪಿಗೆ ಸೋಲಿನ ಉಡುಗೊರೆ ನೀಡಿದ ಮತದಾರ

ನವದೆಹಲಿ: ಹಿಮಾಚಲ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ನಾಲ್ಕು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವನ್ನು ಸಾಧಿಸಿದೆ.


ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು. ಕೊನೆ ಕ್ಷಣದಲ್ಲಿ ಬಿಜೆಪಿಯು ಬೇರೆಯವರಿಗೆ ಟಿಕೆಟ್ ನೀಡಿದರೂ ಬಹಳಷ್ಟು ಜನ ಕಂಗನಾ ಹೆಸರಲ್ಲಿ ಮತ ಕೇಳಿದ್ದರು. ಆದರೆ ಆ ಕ್ಷೇತ್ರದಲ್ಲಿಯೂ ಬಿಜೆಪಿ ಸೋಲು ಅನುಭವಿಸಿದೆ. ಇದು ಆಡಳಿತರೂಢ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಈ ಕುರಿತು ಮಾತನಾಡಿದ ಹಿಮಾಚಲ ಪ್ರದೇಶ ಸಿಎಂ ಜೈರಾಂ ಠಾಕೂರ್, ಸೋಲನ್ನು ಸ್ವೀಕರಿಸುತ್ತೇನೆ, ನಾನೇ ಸೋಲಿನ ಹೊಣೆಯನ್ನು ಹೊತ್ತುಕೊಳ್ಳುತ್ತೇನೆ ಎಂದಿದ್ದಾರೆ.


ಬಿಜೆಪಿಯವರು ದೇಶಕ್ಕೆ ಬೆಲೆ ಏರಿಕೆ ಉಡುಗೊರೆ ಕೊಟ್ಟರು. ಈಗ ಬಿಜೆಪಿಗೆ ದೇಶಾದ್ಯಂತ ದೀಪಾವಳಿಗೆ ಸೋಲಿನ ಉಡುಗೊರೆಯನ್ನು ಮತದಾರರು ಕೊಡುತ್ತಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ದೇಶದ ವಿವಿಧೆಡೆ ಘೋಷಣೆಯಾದ ಉಪಚುನಾವಣೆ ಫಲಿತಾಂಶ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ತವರಿನಲ್ಲಿಯೇ ಬಿಜೆಪಿ ಶೂನ್ಯ ಸಾಧನೆ ಮಾಡಿದೆ ಎಂದಿದ್ದಾರೆ.


ರಾಜಸ್ಥಾನದಲ್ಲಿ ಕಾಂಗ್ರೆಸ್ ಚುನಾವಣೆ ನಡೆದ ಎರಡೂ ಕ್ಷೇತ್ರದಲ್ಲಿ ಜಯಗಳಿಸಿದ್ದರೆ, ಕರ್ನಾಟಕದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮನ್ನಣೆ ಸಿಕ್ಕಿದೆ. ಕೋಮುವಾದದಿಂದಾಗಿ ಬಿಜೆಪಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಯವರ ಕೋಮುವಾದ ನಡೆದಿಲ್ಲ ಎಂದು ತಿಳಿಸಿದ್ದಾರೆ.

Join Whatsapp
Exit mobile version