ನವದೆಹಲಿ: ಹಿಮಾಚಲ ಪ್ರದೇಶ ಸರ್ಕಾರ ಮತ್ತು ಪಕ್ಷದ ಸಂಘಟನೆಯಲ್ಲಿ ಉತ್ತಮ ಸಮನ್ವಯವನ್ನು ಖಾತ್ರಿಪಡಿಸುವ ಸಲುವಾಗಿ ಆರು ಸದಸ್ಯರ ಸಮಿತಿಯನ್ನು ಕಾಂಗ್ರೆಸ್ ರಚಿಸಿದೆ.
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಹಾಘೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರೂ ಸಮಿತಿಯಲ್ಲಿ ಇದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಸರ್ಕಾರ ಮತ್ತು ಪಕ್ಷದ ಸಂಘಟನೆ ನಡುವೆ ಉತ್ತಮ ಸಮನ್ವಯತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಮಿತಿ ರಚಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ತಿಳಿಸಿದ್ದಾರೆ.