ಹಿಮಾಚಲ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಹಿಮಾಚಲ ಪ್ರದೇಶದ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹರ್ಷ್ ಮಹಾಜನ್ ಬುಧವಾರ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಸೇರ್ಪಡೆ ಬಳಿಕ ಮಾತನಾಡಿದ ಮಹಾಜನ್, ”45 ವರ್ಷ ಕಾಂಗ್ರೆಸ್ ನಲ್ಲಿದ್ದೆ. ಇಂದು ಕಾಂಗ್ರೆಸ್ ದಿಕ್ಕು ತೋಚದಂತಾಗಿದೆ, ನಾಯಕನಿಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.