ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, 55 ಲಕ್ಷಕ್ಕೂ ಹೆಚ್ಚು ಮತದಾರರು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧರಿಸಲಿದ್ದಾರೆ.
ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಮಗ ವಿಕ್ರಮಾದಿತ್ಯ ಸಿಂಗ್ ಸೇರಿ 412 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಬಿಜೆಪಿಯು ರಾಜ್ಯದಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿಯುವ ಕಾತರದಲ್ಲಿದ್ದು, ಬಿಜೆಪಿ ಮುಷ್ಟಿಯಿಂದ ರಾಜ್ಯವನ್ನು ಪಡೆದುಕೊಳ್ಳುವುದು ಕಾಂಗ್ರೆಸ್ಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ.