ಹಿಮಾಚಲ ಪ್ರದೇಶ: ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕಣಕ್ಕಿಳಿದ ಬಿಜೆಪಿಯ ಐವರು ನಾಯಕರ ಅಮಾನತು

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ಕಣಕ್ಕಿಳಿದಿರುವ ಐವರು ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ಅಮಾನತು ಮಾಡಲಾಗಿದೆ.

‘ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದವರನ್ನು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿದ್ದಾರೆ.

- Advertisement -


ಹಿಮಾಚಲ ಪ್ರದೇಶ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಕೃಪಾಲ್‌ ಪಾರ್ಮರ್‌, ಮಾಜಿ ಶಾಸಕರಾದ ತೇಜವಂತ್‌ ಸಿಂಗ್‌ ನೇಗಿ, ಕಿಶೋರಿ ಲಾಲ್‌, ಮನೋಹರ್‌ ಧಿಮಾನ್‌, ಕೆ.ಎಲ್‌. ಠಾಕೂರ್‌ ಅಮಾನತುಗೊಂಡ ನಾಯಕರು.

- Advertisement -


ಇವರಿಗೆ ಟಿಕೆಟ್‌ ನಿರಾಕರಿಸಿದ್ದ ಬಿಜೆಪಿ, ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಇವರೆಲ್ಲ ಪಕ್ಷದ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ನವೆಂಬರ್‌ 12ರಂದು ಹಿಮಾಚಲಯ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

Join Whatsapp