ನವದೆಹಲಿ : ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಮನಾಲಿಯಲ್ಲಿ ಭಾರಿ ಹಿಮಪಾತದ ಹಿನ್ನೆಲೆಯಲ್ಲಿ 500ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗಿದೆ ಎಂದು ವರದಿಯೊಂದು ತಿಳಿಸಿದೆ.
ಅಟಲ್ ಸುರಂಗ ಮತ್ತು ಸೊಲಾಂಗ್ ನಡುವಿನ ರಸ್ತೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸಮಸ್ಯೆ ಉದ್ಭವವಾಗಿದೆ. ರಕ್ಷಣಾ ಕಾರ್ಯ ಆರಂಭವಾಗಿದ್ದು, ಆದಷ್ಟು ಬೇಗೆ ವಾಹನ ಸಂಚಾರ ಪುನಃಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮನಾಲಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ ಡಿಎಂ) ರಾಮನ್ ಘರ್ ಸಂಗಿ ತಿಳಿಸಿದ್ದಾರೆ.
ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭಾರೀ ಹಿಮಪಾತದ ಸಾಧ್ಯತೆಯಿದೆ ಎನ್ನಲಾಗಿದೆ. ಜ.3ರಿಂದ ಜ.5ರ ವರೆಗೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ವರದಿ ತಿಳಿಸಿದೆ.