ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಅವರು ಬುಧವಾರ ಅಚ್ಚರಿಯ ನಡೆಯಲ್ಲಿ ಹಿಮಾಚಲ ಪ್ರದೇಶ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಎಲ್ಲವೂ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿದೆ ಎಂದು ಮಾಜಿ ಸಿಎಂ ವೀರಭದ್ರ ಸಿಂಗ್ ಪುತ್ರ ಕೂಡ ಹೇಳಿದ್ದಾರೆ.
68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಶಾಸಕರನ್ನು ಹೊಂದಿದ್ದರೆ ಬಿಜೆಪಿ 25 ಶಾಸಕರನ್ನು ಹೊಂದಿದೆ. ಉಳಿದ ಮೂರು ಸ್ಥಾನಗಳನ್ನು ಸ್ವತಂತ್ರರು ಹೊಂದಿದ್ದಾರೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದ ವಿಕ್ರಮಾದಿತ್ಯ ಸಿಂಗ್, “ಸರ್ಕಾರದ ಕಾರ್ಯವೈಖರಿಯ ಬಗ್ಗೆ ನಾನು ಎಂದಿಗೂ ಏನನ್ನೂ ಹೇಳಿಲ್ಲ, ಆದರೆ ಅದನ್ನು ಇಂದು ಸ್ಪಷ್ಟವಾಗಿ ಹೇಳುವುದು ನನ್ನ ಜವಾಬ್ದಾರಿಯಾಗಿದೆ.