ಹಿಮಾಚಲ ಪ್ರದೇಶ: ಪ್ರತಿಭಾ ಸಿಂಗ್ ಸೇರಿ ಸಿಎಂ ಸ್ಥಾನಕ್ಕೆ ಮೂವರು ಆಕಾಂಕ್ಷಿಗಳು

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ  ಸ್ಥಾನಕ್ಕೆ ಮೂವರ ಹೆಸರು ಮುಂಚೂಣಿಯಲ್ಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

- Advertisement -

ವಿರೋಧ ಪಕ್ಷದ ನಾಯಕರಾಗಿದ್ದ ಮುಕೇಶ್ ಅಗ್ನಿ ಹೋತ್ರಿ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಹಾಗೂ ರಾಜ್ಯ ಘಟಕದ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರ ಹೆಸರು ಮುಂಚೂಣಿಯಲ್ಲಿದೆ.

ಶುಕ್ರವಾರ ಪಕ್ಷದ ರಾಜ್ಯ ಉಸ್ತುವಾರಿ ರಾಜೀವ್ ಶುಕ್ಲಾ ಅವರ ನೇತೃತ್ವದಲ್ಲಿ ನಡೆಯಲಿರುವ ಪಕ್ಷದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿಯ ಆಯ್ಕೆ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡುವ ಒಂದು ಸಾಲಿನ ತೀರ್ಮಾನವನ್ನು ಸಭೆಯಲ್ಲಿ ಅಂಗೀಕರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

- Advertisement -

ಪ್ರತಿಭಾ ಅವರು ರಾಜ್ಯದಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದರು. ಸಂಸದೆಯಾಗಿರುವ ಅವರ ಪರವಾಗಿ ಪಕ್ಷದ ಶಾಸಕರು ಒಲವು ತೋರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ತಮ್ಮ ಕೆಲಸ ಪರಿಗಣಿಸಿ ಪಕ್ಷದ ಹೈಕಮಾಂಡ್ ತಮ್ಮನ್ನು ಆಯ್ಕೆ ಮಾಡಬಹುದು ಎಂಬ ವಿಶ್ವಾಸದಲ್ಲಿ ಮುಕೇಶ್, ಸುಖ್ವಿಂದರ್ ಇದ್ದಾರೆ.

Join Whatsapp