ಹಿಮಾಚಲ ಪ್ರದೇಶ: ಖಾಸಗಿ ವಾಹನದಲ್ಲಿ ಇವಿಎಂ ಸಾಗಿಸುತ್ತಿದ್ದ ಆರು ಮಂದಿ ಬಂಧನ

Prasthutha|


ರಾಂಪುರ: ಖಾಸಗಿ ವಾಹನದಲ್ಲಿ ಇವಿಎಂ ಸಾಗಿಸುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.
ಶಿಮ್ಲಾ ಜಿಲ್ಲೆಯ ರಾಮ್ಪುರ ಕ್ಷೇತ್ರದ ಮತಗಟ್ಟೆಯೊಂದರಿಂದ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಖಾಸಗಿ ವಾಹನದಲ್ಲಿ ಆರೋಪಿಗಳು ಅಕ್ರಮವಾಗಿ ಸಾಗಿಸುತ್ತಿದ್ದರು ಎಂದು ವರದಿಯಾಗಿದೆ.

- Advertisement -

ಆರೋಪಿಗಳು ವಾಹನವನ್ನು ದಾರಿ ಮಧ್ಯೆ ತಡೆದು ನಿಲ್ಲಿಸಿದ ಕಾಂಗ್ರೆಸ್ ಕಾರ್ಯಕರ್ತರು ಇವಿಎಂ ಬಗ್ಗೆ ಪ್ರಶ್ನಿಸಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಡಳಿತದ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದು, ಬಳಿಕ 6 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಮಗ ವಿಕ್ರಮಾದಿತ್ಯ ಸಿಂಗ್ ಸೇರಿ 412 ಅಭ್ಯರ್ಥಿಗಳು ಕಣದಲ್ಲಿದ್ದರು.

Join Whatsapp