ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಸಭಾಧ್ಯಕ್ಷ ಕುಲದೀಪ್ ಸಿಂಗ್ ಅವರು, ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಸೇರಿ 15 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಬಳಿಕ, ಸದನದ ಕಲಾಪವನ್ನು ಮುಂದೂಡಿದ್ದಾರೆ.
ಸದನದಲ್ಲಿ ದುರ್ವರ್ತನೆ ಮತ್ತು ಘೋಷಣೆ ಕೂಗಿದ್ದಕ್ಕಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ರಾಜ್ಯಸಭೆ ಚುನಾವಣೆಯಲ್ಲಿ ಸಾಬೀತಾಗಿದೆ. ಹಾಗಾಗಿ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆಗೆ ಒತ್ತಾಯಿಸಿದ್ದರು.