ಹಿಂದಿ ರಾಷ್ಟ್ರಭಾಷೆ; ವಿವಾದದ ಬೆಂಕಿಗೆ ತುಪ್ಪ ಸುರಿದ ಅರ್ಜುನ್‌ ರಾಮ್‌ಪಾಲ್‌ ವರ್ಮಾ

Prasthutha|

ಹೊಸದಿಲ್ಲಿ: ಹಿಂದಿ ರಾಷ್ಟ್ರ ಭಾಷೆಯಾಗಿದ್ದು, ಅದನ್ನು ಎಲ್ಲರೂ ಗೌರವಿಸಬೇಕು ಎಂದು ಮಾಧ್ಯಮವೊಂದಕ್ಕೆ  ನೀಡಿರುವ ಸಂದರ್ಶನದಲ್ಲಿ ಬಾಲಿವುಡ್‌ ನಟ ಅರ್ಜುನ್‌ ರಾಮ್‌ಪಾಲ್‌  ಹೇಳಿದ್ದಾರೆ.

- Advertisement -

ಭಾರತದಲ್ಲಿ ಹಿಂದಿಯನ್ನು ಹೆಚ್ಚಾಗಿ ಮಾತನಾಡುತ್ತಾರೆ ಹಾಗೂ ಅರ್ಥ ಮಾಡಿಕೊಳ್ಳುತ್ತಾರೆ. ಹೀಗಾಗಿ ಹಿಂದಿ ನಮ್ಮ ರಾಷ್ಟ್ರ ಭಾಷೆ, ಅದನ್ನು ನಾವು ಗೌರವಿಸಬೇಕು ಎಂದು ಸಮರ್ಥಿಸಲು ಪ್ರಯತ್ನಿಸಿದ್ದಾರೆ.

ಕೆಲವು ದಿನಗಳ ಹಿಂದೆ,  ಹಿಂದಿ ಭಾಷೆ  ಬಗ್ಗೆ ಕನ್ನಡದ ನಟ ಸುದೀಪ್ ಮತ್ತು ಹಿಂದಿ ನಟ ಅಜಯ್‌ ದೇವಗನ್‌ ಮಧ್ಯೆ ನಡೆದ ಟ್ವೀಟ್‌ ಸಮರ ನಡೆದಿತ್ತು. ನಟ ಅಜಯ್‌ ದೇವಗನ್‌ ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿದ್ದರು. ಆದರೆ ಸುದೀಪ್‌ ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಹೇಳಿ ಟ್ವೀಟ್‌ ಮಾಡಿದ್ದರು.



Join Whatsapp