‘ಮುಸ್ಲಿಮರ ಹತ್ಯೆಗೆ ಕರೆ ನೀಡಿದರೂ ಭಾರತೀಯ ನಾಯಕರು ಮೌನವಹಿಸಿದ್ದಾರೆ’: ದಿ ನ್ಯೂಯಾರ್ಕ್‌ ಟೈಮ್ಸ್‌ ವರದಿ

Prasthutha|

ನ್ಯೂಯಾರ್ಕ್‌: ಮುಸ್ಲಿಮರ ಹತ್ಯೆಗೆ ಕರೆ ನೀಡಿದರೂ ಭಾರತೀಯ ನಾಯಕರು ಮೌನವಹಿಸಿದ್ದಾರೆ ಎಂದು ಅಮೆರಿಕದ ಪ್ರತಿಷ್ಠಿತ ದಿನ ಪತ್ರಿಕೆ ‘ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ನಾಲ್ಕು ದಿನಗಳ ‘ಧರ್ಮ ಸಂಸದ್‌’ನಲ್ಲಿ ಮುಸ್ಲಿಮರ ಹತ್ಯೆಗೆ ಕರೆ ನೀಡಿದ ಭಾಷಣಗಳು ಇದೀಗ ಅಂತರರಾಷ್ಟ್ರೀಯ ಮಟ್ಟದ ಗಮನ ಸೆಳೆದಿವೆ.

‘ಸಂವಿಧಾನ ಬದ್ಧ ಜಾತ್ಯಾತೀತ ಪ್ರಜಾಪ್ರಭುತ್ವ ರಾಷ್ಟ್ರವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ. ಇದಕ್ಕಾಗಿ ಪ್ರಾಣ ನೀಡುವುದು ಮತ್ತು ಪ್ರಾಣ ತೆಗೆಯುವುದು ಅವಶ್ಯಕವಾಗಿದೆ’ ಎಂದು ಕಾರ್ಯಕ್ರಮದಲ್ಲಿ ಸಂಘಪರಿವಾರದ ಕಾರ್ಯಕರ್ತರು ಮತ್ತು ಸನ್ಯಾಸಿಗಳು ಬಹಿರಂಗ ಸಭೆಯಲ್ಲಿ ಪ್ರತಿಜ್ಞೆ ಮಾಡಿದ್ದರು.

- Advertisement -

’20 ಲಕ್ಷ ಮುಸ್ಲಿಮರನ್ನು ಕೊಲ್ಲಲು ನಾವು ನೂರು ಮಂದಿ ಸಿದ್ಧರಿದ್ದರೆ, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಸಾಧ್ಯ’ ಎಂದು ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್‌ ಪಾಂಡೆ ವೇದಿಕೆಯಲ್ಲಿ ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಆತ್ಮೀಯರಾಗಿರುವ ಪ್ರಭಾವಶಾಲಿ ಧಾರ್ಮಿಕ ಮುಖಂಡರು ಮತ್ತು ಪಕ್ಷದ ಕೆಲವು ಸದಸ್ಯರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಚೋದನಾಕಾರಿ ಭಾಷಣಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದ್ದರೂ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿದ್ದಾರೆ.

ಪೊಲೀಸರು ನಿಧಾನಗತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಪಕ್ಷಗಳು ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡದಿರುವುದು 2014ರಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತವು ಬಲಪಂಥೀಯ ಹಿಂದುತ್ವ ರಾಷ್ಟ್ರೀಯವಾದಿಗಳ ಬಿಗಿಹಿಡಿತದಲ್ಲಿದೆ ಎಂಬ ಸೂಚನೆಯನ್ನು ನೀಡಿದೆ ಎಂದು ‘ದಿ ನ್ಯೂಯಾರ್ಕ್‌ ಟೈಮ್ಸ್‌’ ವರದಿ ಮಾಡಿದೆ.



Join Whatsapp