Home ರಾಜ್ಯ ಮುಸ್ಲಿಮ್ ಬಾಲಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ..!

ಮುಸ್ಲಿಮ್ ಬಾಲಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ..!

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾದ ಬಾಲಕಿಯ ಅಂಗಾಂಗ ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಅದರಂತೆ 22 ವರ್ಷದ ಯುವಕನಿಗೆ ಬಾಲಕಿಯ ಹೃದಯ ಕಸಿ ಮಾಡಲು ವೈದ್ಯರು ಸಿದ್ಧತೆ ನಡೆಸಿದ್ದಾರೆ.

ಉತ್ತರ ಕನ್ನಡ‌ ಜಿಲ್ಲೆಯ 15 ವರ್ಷದ ಹಿಂದೂ ಬಾಲಕಿಯನ್ನು ಧಾರವಾಡದ ಎಸ್‌ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಮೆದುಳು ನಿಷ್ಕ್ರಿಯವಾದ ಹಿನ್ನೆಲೆಯಲ್ಲಿ ಅಂಗಾಂಗ ದಾನಕ್ಕೆ ಪೋಷಕರು ನಿರ್ಧರಿಸಿದ್ದರು. ಬೆಳಗಾವಿಯ ಕೆಎಲ್​​​​ ಇ ಆಸ್ಪತ್ರೆಯಲ್ಲಿ ಮುಸ್ಲಿಮ್ ಯುವಕನೊಬ್ಬ ಹೃದ್ರೋಗದಿಂದ ಬಳಲುತ್ತಿದ್ದು, ಆ ಯುವಕನಿಗೆ ಜೋಡಿಸಲು ಬಾಲಕಿಯ ಹೃದಯವನ್ನು ರವಾನಿಸಲಾಗಿದೆ.

Join Whatsapp
Exit mobile version