Home ಟಾಪ್ ಸುದ್ದಿಗಳು ‘ಹಿಂದೂ’ ಭಾರತೀಯ ಪದವೇ ಅಲ್ಲ, ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ

‘ಹಿಂದೂ’ ಭಾರತೀಯ ಪದವೇ ಅಲ್ಲ, ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.


ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ‘ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್’ ಎನ್ನುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಭಾರತಕ್ಕೂ, ಪರ್ಷಿಯನ್ ಗೂ ಏನ್ ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದರು.


ಬಿಜೆಪಿ ನಾಯಕರು ಶಿವಾಜಿ ಬಗ್ಗೆ ಮಾತನಾಡುತ್ತಾರೆ. ಆದರೆ ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೆ ಛತ್ರಪತಿ ಶಿವಾಜಿ ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್ ಇರುವುದು. ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ್ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್ ತಯಾರಿಸಿದ್ದರು ಎಂದು ಹೇಳಿದ್ದಾರೆ.

Join Whatsapp
Exit mobile version