ಉಡುಪಿ: ಕಾರ್ಕಳ ತಾಲೂಕಿನ ಕುಕ್ಕುಂದೂರು ಎಂಬ ಪ್ರದೇಶದಲ್ಲಿರುವ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ಮತಾಂತರ ನಡೆಸುತ್ತಿದ್ದಾರೆ ಎಂಬ ನೆಪವನ್ನೊಡ್ಡಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಡೆಸಿರುವ ದಾಳಿಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ.
ಹಿಂದೂ ಜಾಗರಣ ವೇದಿಕೆ ಈ ಹಿಂದೆಯೂ ಸಹ ಜಿಲ್ಲೆಯಲ್ಲಿ ಪ್ರಾರ್ಥನಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕೆಡಿಸುವಂತಹ ಪ್ರಯತ್ನವನ್ನು ಮಾಡಿತ್ತು, ಇಂದಿನ ಈ ಘಟನೆ ಅದರ ಮುಂದುವರಿದ ಭಾಗವಷ್ಟೇ. ಆದ್ದರಿಂದ ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡು ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಹಾಗೂ ಸಮಾಜದ ಶಾಂತಿ ಹಾಗೂ ಸೌಹಾರ್ದತೆಯನ್ನು ಕೆಡಿಸಲು ನಿರಂತರ ಪ್ರಯತ್ನ ಪಡುತ್ತಿರುವ ಹಿಂದೂ ಜಾಗರಣ ವೇದಿಕೆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.