ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಬಾವಿಗೆ ಬಿದ್ದು ಸಾವು

Prasthutha|

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತನೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರಿನ ಸುಳ್ಯಪದವು ಬಳಿ ನಡೆದಿದೆ.

- Advertisement -


ಪುತ್ತೂರು ತಾಲೂಕು ಸುಳ್ಯಪದವು ಕನ್ನಡ್ಕ ನಿವಾಸಿ ಧನುಷ್ (21) ಎಂದು ಸಾವನ್ನಪ್ಪಿದ ಯುವಕ. ಧನುಷ್ ರಾತ್ರಿ ತನ್ನ ಮನೆಗೆ ಹೋಗುತ್ತಿದ್ದ ವೇಳೆ ತೋಟದಲ್ಲಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದ ಧನುಷ್,. ಕೆಲ ದಿನಗಳ ಹಿಂದಷ್ಟೇ ನಡೆದ ಹಿಂದೂ ಜಾಗರಣ ವೇದಿಕೆ ಸುಳ್ಯಪದವು ಘಟಕದಲ್ಲಿ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿಯೂ ಆಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.



Join Whatsapp