ಹಿಂದು ಕಾರ್ಯಕರ್ತರ ಮೇಲಿನ ಕೇಸ್ ರದ್ದುಪಡಿಸಿ: ಶ್ರೀ ನಿವಾಸ ಪೂಜಾರಿ ಮನವಿ

Prasthutha|

ಬೆಂಗಳೂರು: ಬಿಜೆಪಿ ಹಾಗೂ ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ದುರುದ್ದೇಶ ಪೂರ್ವಕವಾಗಿ ದಾಖಲಿಸಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ನಿವಾಸ ಪೂಜಾರಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಸೋಮವಾರ ವಿಧಾನಸೌಧದಲ್ಲಿ ಗೃಹ ಸಚಿವರನ್ನು ನಿವಾಸ ಪೂಜಾರಿ ಭೇಟಿ ಮಾಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಹಲವು ಕಡೆ ಬಿಜೆಪಿ ಹಾಗೂ ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಕೆಲ ಪಟ್ಟಭದ್ರ ಹಿತಾಸಕ್ತಿಗಳು ದುರುದ್ದೇಶಪೂರ್ವಕವಾಗಿ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ ಎಂದು ತಿಳಿಸಿದರು. ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯುವಂತೆ ಕಾರ್ಯಕರ್ತರು ತಮಗೆ ಮನವಿ ಸಲ್ಲಿಸಿದ್ದಾರೆ.  ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಸಚಿವ ನಿವಾಸ ಪೂಜಾರಿ ಎಂದು ಗೃಹ ಸಚಿವರನ್ನು ಮನವಿ ಮಾಡಿದರು.



Join Whatsapp