Home ಟಾಪ್ ಸುದ್ದಿಗಳು ಕೋಮು ಹಿಂಸಾಚಾರ ನಡೆದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು: ಡಿಜಿಪಿ ಪ್ರವೀಣ್ ಸೂದ್ ಎಚ್ಚರಿಕೆ

ಕೋಮು ಹಿಂಸಾಚಾರ ನಡೆದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು: ಡಿಜಿಪಿ ಪ್ರವೀಣ್ ಸೂದ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ಯಾವುದೇ ಭಾಗದಲ್ಲಿ ಧರ್ಮದ ವಿಚಾರದಲ್ಲಿ ನಡೆಯುವ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ರಾಜ್ಯದಲ್ಲಿ ಕೋಮು ಹಿಂಸೆಗಿಳಿಯುವವರನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಡಿಜಿಪಿ ಅವರಿಂದ ಈ ಆದೇಶ ಹೊರ ಬಂದಿರುವುದು ಸಾಕಷ್ಟು ಮಹತ್ವ ಪಡೆದಿದೆ.

ಪ್ರಸಕ್ತ ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಕ್ಕೆ ಹಿನ್ನೆಲೆಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಅವರು ರಾಜ್ಯದ ಎಲ್ಲಾ ಕಮಿಷನರ್, ಐಜಿಪಿ ಹಾಗೂ ಎಸ್ಪಿಗಳ ಜೊತೆ ವೀಡಿಯೋ ಸಂವಾದ ನಡೆಸಿ, ಧಾರ್ಮಿಕ ವಿಚಾರದಲ್ಲಿ ಸಂಘರ್ಷಗಳು ಆಗದಂತೆ ಮೇಲ್ವಿಚಾರಣೆ ನಡೆಸಬೇಕು. ಮಾತ್ರವಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

Join Whatsapp
Exit mobile version