ಹರಿದ್ವಾರ(ಉತ್ತರಾಖಂಡ್): ಹಿಂದೂಯೇತರರಿಗೆ ಹಿಮಾಲಯ ಪ್ರವೇಶ ನಿಷೇಧಿಸಬೇಕೆಂದು ಶಂಕರಾಚಾರ್ಯ ಪರಿಷತ್ತಿನ ಅಧ್ಯಕ್ಷ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಪ್ರವೇಶ ನಿಷೇಧಕ್ಕೆ ಸಂಬಂಧಿಸಿದಂತೆ ಸರ್ಕಾರವು ಸುಗ್ರೀವಾಜ್ಞೆ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಹರಿದ್ವಾರದ ಹಂಭಾವಿ ಧಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮದನ್ ಮೋಹನ್ ಮಾಳವೀಯ ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಆಧಾರದ ಮೇಲೆ ಹಿಮಾಲಯದಲ್ಲಿ ಹಿಂದೂಯೇತರರ ಪ್ರವೇಶ ತಡೆಯುವ ಸುಗ್ರೀವಾಜ್ಞೆಯನ್ನು ಸರ್ಕಾರ ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದು, ಸುಗ್ರೀವಾಜ್ಞೆ ಜಾರಿಗೊಳಿಸದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.