ಮಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡಿತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇದೀಗ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ವಿವಾದಕ್ಕೆ ಕಾರಣವಾಗಿದೆ.
. “ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು”. “ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ”. ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲು ಎಷ್ಟು. ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು ಎಂದು ಹೇಳಿದ್ದಾರೆ.
ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕೆಂದು ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದೆ.