ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳ ಪ್ರಾರ್ಥನೆ ಹಾಗೂ ಪೂಜೆಗೆ ತಡೆ ನೀಡ ಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈಅ ರ್ಜಿಗೆ ಸಂಬಂಧಿಸಿದಂತೆ ಕಾಶಿ ವಿಶ್ವನಾಥ ದೇವಸ್ಥಾನದ ಟ್ರಸ್ಟಿಗಳಿಂದ ಪ್ರತಿಕ್ರಿಯೆ ನೀಡುವಂತೆ ನ್ಯಾಯಪೀಠ ಕೋರಿದೆ.
ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪೂಜೆಗೆ ಅನುಮತಿಯನ್ನು ವಿರೋಧಿಸಿ ಜ್ಞಾನವಾಪಿ ಮಸೀದಿ ಸಮಿತಿಯ ಮನವಿಯನ್ನು ಜುಲೈನಲ್ಲಿ ಅಂತಿಮ ನಿರ್ಧಾರಕ್ಕೆ ನಿಗದಿಪಡಿಸಿದೆ. ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂ ಪ್ರಾರ್ಥನೆಗೆ ಅವಕಾಶ ನೀಡುವ ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಹೊಸ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.