Home ಟಾಪ್ ಸುದ್ದಿಗಳು ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರಗೊಂಡ ಹಿಂದೂಗಳು: ದೇವತೆಗಳನ್ನು ಎಂದಿಗೂ ಪೂಜಿಸುವುದಿಲ್ಲ ಎಂದು ಪ್ರತಿಜ್ಞೆ

ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರಗೊಂಡ ಹಿಂದೂಗಳು: ದೇವತೆಗಳನ್ನು ಎಂದಿಗೂ ಪೂಜಿಸುವುದಿಲ್ಲ ಎಂದು ಪ್ರತಿಜ್ಞೆ

ನವದೆಹಲಿ: ಹಿಂದೂಗಳು ಸಾಮೂಹಿಕವಾಗಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ದೆಹಲಿಯಲ್ಲಿ ನಡೆದಿದ್ದು, ಇನ್ನೆಂದಿಗೂ ನಾವು ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರತಿಜ್ಞೆಗೈದಿದ್ದಾರೆ.

ಆಮ್ ಆದ್ಮಿ ಸರ್ಕಾರದ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಸಾಮೂಹಿಕ ಮತಾಂತರ ಕಾರ್ಯಕ್ರಮವನ್ನು ಆಯೋಜಿಸಿ 10 ಸಾವಿರ ಹಿಂದೂಗಳನ್ನು ಬೌದ್ಧ ಧರ್ಮಕ್ಕೆ ಮತಾಂತರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಸರಾದ ವೇಳೆ ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 5ರಂದು ಈ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಿಂದೂ ದೇವರು, ದೇವತೆಗಳನ್ನು ಇನ್ನೂ ಎಂದಿಗೂ ಪೂಜಿಸುವುದಿಲ್ಲ ಎಂದು ಮತಾಂತರಗೊಂಡ ಹಿಂದೂಗಳಲ್ಲಿ ಪ್ರತಿಜ್ಞೆ ಮಾಡಿಸಲಾಗಿದೆ. ಅಲ್ಲದೆ ಬೌದ್ಧ ಧರ್ಮದಲ್ಲಿ ಸಂಪೂರ್ಣವಾಗಿ ವಿಶ್ವಾಸವಿರಿಸುವಂತೆ ಆದೇಶ ನೀಡಲಾಗಿದೆ ಎಂದು ತಿಳಿಸಲಾಗಿದೆ.

Join Whatsapp
Exit mobile version