ಬಿಜೆಪಿಗೆ ಪರ್ಯಾಯವಾಗಿ ಹಿಂದೂಸ್ಥಾನ್ ಜನತಾ ಪಕ್ಷ ಲೋಕಾರ್ಪಣೆ !

Prasthutha|

ಬೆಂಗಳೂರು: ರಾಜ್ಯದಲ್ಲಿ ಇದೀಗ ಚುನಾವಣಾ ಕಸರತ್ತು ಜೋರಾಗಿದ್ದು, ಒಂದು ಕಡೆ ಅಧಿಕಾರಕ್ಕೇರಲು ರಾಷ್ಟ್ರೀಯ ಪಕ್ಷಗಳು ಯೋಜನೆ ಹಾಕುತ್ತಿದ್ದರೆ, ಮತ್ತೊಂದೆಡೆ ಹಿಂದುತ್ವ ಫೈರ್ ಬ್ರ್ಯಾಂಡ್ ಪ್ರಮೋದ್ ಮುತಾಲಿಕ್ ಅವರು ಆಗಸ್ಟ್ 7 ರಂದು ಹಿಂದೂಸ್ಥಾನ್ ಜನತಾ ಪಕ್ಷವೆಂಬ ಹೊಸ ಪಕ್ಷವನ್ನು ಸ್ಥಾಪಿಸಲು ಯೋಚನೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಬಿಜೆಪಿ ಮತ್ತು ಇತರೆ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗಿ ಹಿಂದುತ್ವದ ಅಜೆಂಡಾದ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಲು ಈ ಪಕ್ಷವನ್ನು ಸ್ಥಾಪಿಸಲು ಮುಂದಾಗಿದೆ. ವಿನಾಯಕ್ ಮಾಳದಕರ್ ಎಂಬವರು ಪಕ್ಷದ ನೂತನ ಅಧ್ಯಕ್ಷರಾಗಲಿದ್ದು, ಶೀಘ್ರದಲ್ಲೇ ಇತರೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.

ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮಠಾಧೀಶರು ನೂತನ ಪಕ್ಷಕ್ಕೆ ಚಾಲನೆ ನೀಡಲಿದ್ದಾರೆ. ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷವು ಸ್ಪರ್ಧೆ ನಡೆಸಲಿದ್ದು, ಎಲ್ಲಾ 224 ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ ಎಂದು ಹೇಳಲಾಗಿದೆ.

Join Whatsapp