ಮಂಗಳೂರು ವಿವಿಯಲ್ಲಿ ಕುಲಪತಿ ಸ್ಥಾನ ನೀಡುವುದಾಗಿ ವಂಚನೆ | ಹಿಂದುತ್ವ ಸಂಘಟನೆ ನಾಯಕ ಪ್ರಸಾದ್ ಅತ್ತಾವರ ಬಂಧನ

Prasthutha|

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಸ್ಥಾನ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ.  

- Advertisement -

ಮಂಗಳೂರು ವಿಶ್ವವಿದ್ಯಾನಿಲಯದ ಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕರಾಗಿರುವ ವಿವೇಕ್ ಆಚಾರ್ಯ ದೂರು ನೀಡಿದ್ದು, ಮಂಗಳೂರು ಅಥವಾ ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ನಂಬಿಸಿ 17.5 ಲಕ್ಷ ಹಣ ಪಡೆದು ಮೋಸ ಮಾಡಿರುವುದಾಗಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದುತ್ವ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಪ್ರಸಾದ್ ಅತ್ತಾವರ್ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟ್ ಬುಕ್ ಮಾಡಲಾಗಿತ್ತು. ಪ್ರಸಾದ್ ಅತ್ತಾವರ್ ಬಂದರು, ಕದ್ರಿ ಮತ್ತು ಕಂಕನಾಡಿ ಠಾಣೆಗಳಲ್ಲಿ ಹಲವು ಕೇಸುಗಳನ್ನು ಎದುರಿಸುತ್ತಿದ್ದಾನೆ.



Join Whatsapp