ಮಂಗಳೂರು: ಇಸ್ಲಾಮ್ ಮತ್ತು ಮುಸ್ಲಿಮರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಅವಹೇಳನಕಾರಿ ಭಾಷಣ ಮಾಡಿದ್ದು, ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಿನ್ನೆ ನಡೆದ ಹಿಂದೂ ಜಾಗೃತಿ ಸಭೆಯಲ್ಲಿ ಭಾಷಣ ಮಾಡಿರುವ ಅವರು, ಇಸ್ಲಾಂ ಎನ್ನುವಂತಹದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿ ಅಲ್ಲ, ಸಭ್ಯತೆ ಅಲ್ಲ, ಸಂಸ್ಕಾರ ಅಲ್ಲ, ಮಾನವೀಯತೆ ಅಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಕುರಿತ ವೀಡಿಯೋ ವೈರಲ್ ಆಗಿತ್ತು.
ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ಧರ್ಮದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸುವಂತೆ ಹಲವು ಸಂಘ ಸಂಸ್ಥೆಗಳು ಆಗ್ರಹಿಸಿವೆ.
ಇತ್ತೀಚೆಗೆ ಪ್ರವಾದಿ ನಿಂದನೆ ಹೇಳಿಕೆ ನೀಡಿದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ದೇಶ ವಿದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ದೇಶದ ಗೌರವಕ್ಕೆ ಧಕ್ಕೆ ತಂದದ್ದಕ್ಕಾಗಿ ಆಕೆಯನ್ನು ಬಿಜೆಪಿ ವಕ್ತಾರೆ ಸ್ಥಾನದಿಂದ ಕೆಳಗಿಳಿಸಬೇಕಾಗಿ ಬಂದಿದೆ.