Home ಟಾಪ್ ಸುದ್ದಿಗಳು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ಕೆ ಕುಮಾರಸ್ವಾಮಿ ರಾಜೀನಾಮೆ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ಕೆ ಕುಮಾರಸ್ವಾಮಿ ರಾಜೀನಾಮೆ

ಹಾಸನ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜೆಡಿಎಸ್ ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.

ಸಕಲೇಶಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಕುಮಾರಸ್ವಾಮಿಯವರ ಆದೇಶದಂತೆ ಪಕ್ಷದ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿದ್ದು  ಪಕ್ಷದ ಸಂಘಟನೆಗೆ ನಾನು ಬದ್ಧನಾಗಿದ್ದೇನೆ. ನಾನು ನನ್ನ ಕ್ಷೇತ್ರದ ಬಗ್ಗೆ ಹೆಚ್ಚು ಗಮನ ಕೊಡಬೇಕಿದೆ ಎಂದರು.

ಸಿಎಂ ಇಬ್ರಾಹಿಂ ಅವರು ಏಪ್ರಿಲ್ 17ರಂದು ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಆಗಲಿದ್ದಾರೆ ಎಂಬ ವಿಷಯ ಘೋಷಣೆ ಆಗಿದ್ದು ಈ ವರೆಗೆ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಜೆಡಿಎಸ್ ನೂತನ ಸಾರಥಿಯಾಗಿ ಸಿಎಂ ಇಬ್ರಾಹಿಂ ಬರಲಿದ್ದಾರೆ ಎಂದರು.

Join Whatsapp
Exit mobile version