HMPV ವೈರಸ್​ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್

Prasthutha|

ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್​ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು ಎಂದು ಅವರು ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.
ಭಾರತದಲ್ಲಿ ಹೆಚ್ ​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್​​ಎಂಪಿ ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಮ್ಯೂಟೆಟ್​ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್​​ಎಂಪಿ ವೈರಸ್​ ರೀತಿ ನೂರಾರು ವೈರಸ್​ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್ ​​ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್​ ಆಗಲಿದೆ ಎಂದು ಹೇಳಿದ್ದಾರೆ.
“ಹೆಚ್​ಎಂಪಿವಿ ಮೊದಲಿನಿಂದಲೂ ಸಕ್ರಿಯವಾಗಿರುವ ವೈರಸ್ ಮತ್ತು ನಿರ್ದಿಷ್ಟ ಶೇಕಡಾವಾರು ಜನರು ಈ ವೈರಸ್‌ನಿಂದ ಪ್ರಭಾವಿತರಾಗಿದ್ದಾರೆ. ಇದು ಹೊಸದೇನಲ್ಲ. ವೈರಸ್​ ಕಂಡುಬಂದ ಮಗುವಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಮಗುವಿನ ಪೋಷಕರು ಸ್ಥಳೀಯ ಜನರಾಗಿದ್ದಾರೆ. ಅವರು ಚೀನಾ ಅಥವಾ ಮಲೇಷ್ಯಾದಿಂದ ಬಂದಿಲ್ಲ” ಎಂದು ಅವರು ಹೇಳಿದರು.

- Advertisement -

ಚೀನಾದಲ್ಲಿ ಹರಡಿರುವ ವೈರಸ್​ ಮತ್ತು ಭಾರತದಲ್ಲಿ ಪತ್ತೆಯಾದ ವೈರಸ್ ನಡುವೆ ಸಂಬಂಧವಿದೆಯೇ ಎಂಬುದನ್ನು ನಿರಾಕರಿಸಿದ ಸಚಿವರು, “ಹೆಚ್​ಎಂಪಿವಿಯ ಹೊಸ ರೂಪಾಂತರದಿಂದಾಗಿ ಚೀನಾದಲ್ಲಿ ಏಕಾಏಕಿ ಸೋಂಕು ಕಂಡುಬಂದಿದೆ. ಅದರ ಬಗ್ಗೆ ನಮಗೆ ಇನ್ನೂ ಯಾವುದೇ ವಿವರಗಳಿಲ್ಲ. ಆದರೆ ಹೆಚ್​ಎಂಪಿವಿ ಬಹಳ ಹಿಂದಿನಿಂದಲೂ ಇದೆ. ಇದು ಶೀತ, ಕೆಮ್ಮು ಮತ್ತು ಜ್ವರದಂತಹ ಸಾಮಾನ್ಯ ಲಕ್ಷಣಗಳನ್ನು ಉಂಟುಮಾಡುತ್ತದೆ. ಇದು ಸೀಮಿತ ಸಮಯದ ವೈರಸ್ ಆಗಿದ್ದು, ಸ್ವಲ್ಪ ದಿನಗಳಲ್ಲೇ ಕಡಿಮೆ ಆಗುತ್ತದೆ” ಎಂದು ಸಚಿವ ದಿನೇಶ್​ ಗುಂಡೂರಾವ್ ಮಾಹಿತಿ ನೀಡಿದರು.



Join Whatsapp