ದೆಹಲಿ-ಮುಂಬೈ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ: ಎಫ್ ಐಆರ್ ದಾಖಲು

Prasthutha|

ಇಂದೋರ್: ದೆಹಲಿಯಿಂದ ಇಂದೋರ್ ಮೂಲಕ ಮುಂಬೈ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

- Advertisement -


ಬಳಿಕ ನಡೆಸಿದ ತನಿಖೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಇಂದೋರ್ನಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

- Advertisement -


ಏರ್ ಇಂಡಿಯಾ ಎಐ 636 ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಮಂಗಳವಾರ ಸಂಜೆ 5.8ಕ್ಕೆ ಪೋಸ್ಟ್ ಮಾಡಲಾಗಿತ್ತು. ಆಗಲೇ ದೆಹಲಿಯಿಂದ ಹೊರಟ ವಿಮಾನ ಇಂದೋರ್ನಿಂದ ಮುಂಬೈಯತ್ತ ತೆರಳಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.




Join Whatsapp