Home ಟಾಪ್ ಸುದ್ದಿಗಳು ದೆಹಲಿ-ಮುಂಬೈ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ: ಎಫ್ ಐಆರ್ ದಾಖಲು

ದೆಹಲಿ-ಮುಂಬೈ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ: ಎಫ್ ಐಆರ್ ದಾಖಲು

ಇಂದೋರ್: ದೆಹಲಿಯಿಂದ ಇಂದೋರ್ ಮೂಲಕ ಮುಂಬೈ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.


ಬಳಿಕ ನಡೆಸಿದ ತನಿಖೆಯಲ್ಲಿ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಇಂದೋರ್ನಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.


ಏರ್ ಇಂಡಿಯಾ ಎಐ 636 ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಮಂಗಳವಾರ ಸಂಜೆ 5.8ಕ್ಕೆ ಪೋಸ್ಟ್ ಮಾಡಲಾಗಿತ್ತು. ಆಗಲೇ ದೆಹಲಿಯಿಂದ ಹೊರಟ ವಿಮಾನ ಇಂದೋರ್ನಿಂದ ಮುಂಬೈಯತ್ತ ತೆರಳಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version