ಭಾರತಕ್ಕೆ 27ನೇ ಪದಕ ಗೆದ್ದು ಕೊಟ್ಟ ಹೊಕಾಟೊ ಹೊಟೊಝೆ

Prasthutha|

ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಝೆ ಸೆಮಾ ಕಂಚಿನ ಪದಕವನ್ನು ಗೆದ್ದಿದ್ದಾರೆ.

- Advertisement -

ಶುಕ್ರವಾರ ಸ್ಟೇಡ್ ಡಿ ಫ್ರಾನ್ಸ್‌ ಮೈದಾನದಲ್ಲಿ ನಡೆದ ಫೈನಲ್ ಸುತ್ತಿನಲ್ಲಿ 14.65 ಮೀಟರ್‌ ದೂರಕ್ಕೆ ಎಸೆಯುವ ಮೂಲಕ ಹೊಕಾಟೊ ಮೂರನೇ ಸ್ಥಾನ ಪಡೆದರು.

ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ 27ನೇ ಪದಕ ಗೆದ್ದುಕೊಟ್ಟರು. ಇನ್ನು ಈ ಸ್ಪರ್ಧೆಯಲ್ಲಿ ಇರಾನ್‌ನ ಯಾಸಿನ್ ಖೋಸ್ರಾವಿ 15.96 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಪದಕ ಗೆದ್ದರೆ, ಬ್ರೆಝಿಲ್‌ನ ಥಿಯಾಗೊ ಪಾಲಿನೊ ಡಾಸ್ ಸ್ಯಾಂಟೋಸ್ 15.06 ಮೀಟರ್‌ಗಳ ಅತ್ಯುತ್ತಮ ಪ್ರಯತ್ನದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.



Join Whatsapp