ಬೆಂಗಳೂರು: ಡಿಸೆಂಬರ್ 31 ಅಥವಾ ಅದಕ್ಕಿಂತಲೂ ಮುಂಚಿತವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ನಡೆಸುವಂತೆ ಬೊಮ್ಮಾಯಿ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ಮೀಸಲಾತಿ ಅಧಿಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್’ಗೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಅಂಗೀಕರಿಸಿ ನ್ಯಾಯಮೂರ್ತಿ ಹೇಮಂತ್ ಚಂದನ್’ಗೌಡರ್ ಅವರು ಈ ಆದೇಶ ನೀಡಿದ್ದಾರೆ.
ಒಬಿಸಿ ಜನಸಂಖ್ಯೆಗೆ ಸಂಬಂಧಿಸಿದಂತೆ ಅಂಕಿಅಂಶಗಳನ್ನು, ಒಬಿಸಿ ಮೀಸಲಾತಿಯನ್ನು ನಿರ್ಧರಿಸಲು ನೇಮಿಸಲಾದ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದ ಆಯೋಗಕ್ಕೆ ನೀಡುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹಿಂದಿನ ಬಿಬಿಎಂಪಿ ಅವಧಿ ಸೆಪ್ಟೆಂಬರ್ 2020ರಲ್ಲಿ ಕೊನೆಗೊಂಡಿದೆ.