ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕುಗಳಲ್ಲಿ ಶಾಲೆ,ಪಿಯು ಕಾಲೇಜುಗಳಿಗೆ ರಜೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು(ಸೋಮವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಸೋಮವಾರವೂ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.