ಮನೆಗೆ ಆಕಸ್ಮಿಕ ಬೆಂಕಿ: ವ್ಯಕ್ತಿ ಸಜೀವ ದಹನ

Prasthutha|

ಮೈಸೂರು: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಸೀಹಳ್ಳಿಯ ಸೋಮಶೇಖರಪ್ಪ (53) ಮೃತ ದುರ್ದೈವಿಯಾಗಿದ್ದಾರೆ. ಸೋಮಶೇಖರಪ್ಪ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನೋಡನೋಡುತ್ತಿದ್ದಂತೆ ಸಂಪೂರ್ಣ ಮನೆ ಹೊತ್ತಿ ಉರಿದಿದೆ. ಈ ವೇಳೆ ಮನೆಯಲ್ಲಿದ್ದ ಸೋಮಶೇಖರಪ್ಪ ಬೆಂಕಿಯ ತೀವ್ರತೆಗೆ ಹೊರ ಬರಲಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

- Advertisement -

ಘಟನೆಯಲ್ಲಿ ಸೋಮಶೇಖರಪ್ಪ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಬೆಂಕಿಗಾಹುತಿಯಾಗಿದೆ. ಟಿ. ನರಸೀಪುರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp