ಕಾಯ್ದೆ ಉಲ್ಲಂಘನೆಗಾಗಿ ಮೊಕದ್ದಮೆ ದಾಖಲು : ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಕೋವಿಡ್ ಸೋಂಕಿನ ನಡುವೆಯೂ ಪಾದಯಾತ್ರೆಯನ್ನು ಕೈಗೊಳ್ಳುವುದರ ಮೂಲಕ, ಕಾಂಗ್ರೆಸ್ ನಾಯಕರು  ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು,  ಕೋವಿಡ್ ನಿಯಂತ್ರಣ ಕಾಯಿದೆಯನ್ನು ಉಲ್ಲಂಘಿಸಿದವರ ವಿರುದ್ಧ ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು ಆದರೆ ನಮ್ಮ ಆತಂಕ  ಇರುವುದು ಸಾರ್ವಜನಿಕರ  ಆರೋಗ್ಯ ಕಾಪಾಡಿಕೊಳ್ಳುವುದಾಗಿದೆ ಎಂದರು.

ಕೋವಿಡ್ ಸೋಂಕು ಉಲ್ಬಣಗೊಂಡು ಜನತೆ ಸಂಕಷ್ಟಕ್ಕೆ ಒಳಗಾದರೆ, ಕಾಂಗ್ರೆಸ್ ನಾಯಕರು ಹೊಣೆ ಹೊರಬೇಕಾದೀತು ಎಂದು ಎಚ್ಚರಿಸಿದ ಸಚಿವರು ” ಕಾಂಗ್ರೆಸ್ ನಡೆಗೆ ನಾಡಿನ ಜನತೆಯೂ ಅಸಮಾಧಾನ ಗೊಂಡಿದ್ದಾರೆ” ಎಂದು ತಿಳಿಸಿದರು.

- Advertisement -

ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನಿಭಾಯಿಸುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಅವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದಿದ್ದಾರೆ.

ಪಾದಯಾತ್ರೆ ಕರೋನಾ ಯಾತ್ರೆ ಆಗುವುದು ಬೇಡ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ

ಪಾದಯಾತ್ರೆ ಕರೋನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಕರೆ ನೀಡಿದ್ದಾರೆ.

ಆರಂಭದಲ್ಲಿ ಇವರು, ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ  ಪರಿಣಾಮದ ಬಗ್ಗೆ ಆತಂಕ ಇತ್ತು.

ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು.

ಈಗ ನಮ್ಮ ಆತಂಕ ನಿಜವಾಗುತ್ತಿದೆ ಕರೋನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪ ಪ್ರಚಾರ ಮಾಡುತ್ತಿರುವುದಲ್ಲದೆ  ವಿತಂಡ ವಾದ ಮಂಡಿಸುತ್ತಿದ್ದಾರೆ.ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ.

ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ, ಮನವಿ ಮಾಡುತ್ತೇನೆ ನಿಮ್ಮ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ, ಪಾದಯಾತ್ರೆ ಕಾರ್ಯಕ್ರಮ ವನ್ನು ಕೈಬಿಡಿ ಎಂದು ಮನವಿ ಮಾಡಿದ್ದಾರೆ

Join Whatsapp