ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ  ಬಗ್ಗೆ  ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

 ಸಾರ್ವಜನಿಕರಿಂದ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Join Whatsapp