ಬೆಂಗಳೂರು: ಉಡುಪಿಯ ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೈದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಡೆತ್ ನೋಟ್ ಬಗ್ಗೆ ನನಗಿನ್ನೂ ಮಾಹಿತಿಯಿಲ್ಲ, ಅದು ಡೆತ್ ನೋಟ್ ಅಲ್ಲ ಎನ್ನಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಸಚಿವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದು ಈಶ್ವರಪ್ಪರನ್ನು ರಕ್ಷಿಸುವ ಪ್ರಯತ್ನದ ಭಾಗ ಎಂದು ಆರೋಪಿಸಿದ್ದಾರೆ. ಡೆತ್ ನೋಟ್ ಇದೆಯೋ ಇಲ್ಲವೋ ಎಂದು ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್ ನೋಟ್ ಅಲ್ಲ ಎನ್ನಿಸುತ್ತದೆ, ಆರೋಪ ಮಾಡುವುದು, ಸಾಬೀತು ಮಾಡುವುದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ ಎಂದು ಹೇಳಿದ್ದಾರೆ.
ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನರ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿ, ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೈದಿದ್ದರು.