ಹಿಜಾಬ್ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಸಮಾಲೋಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ದ್ವಿ ಸದಸ್ಯ ಪೀಠದಿಂದ ವಿಭಿನ್ನ ತೀರ್ಪು ಹೊರ ಬಂದಿದ್ದು, ವಿವಾದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

- Advertisement -

ಹಿಜಾಬ್ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಿಗದಿತ ಸಮವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಇದರ ಬಗ್ಗೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ತೀರ್ಪಿನ ಕುರಿತು ಕಾನೂನು ತಜ್ಞರ ಸಲಹೆ ಪಡೆದು ಕೊಳ್ಳಲಾಗುವುದು ಎಂದು ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.



Join Whatsapp