Home ಟಾಪ್ ಸುದ್ದಿಗಳು ಮೈಸೂರು ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ

ಮೈಸೂರು ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ

ಮೈಸೂರು: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.


ಭೇಟಿ ಸಮಯದಲ್ಲಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್. ಎಂ. ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಬಾನುಲಿ ಪ್ರಸಾರ ಕೇಂದ್ರದ ಮೂಲಕ ಕಾರಾಗೃಹ ವಾಸಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸರಕಾರದಿಂದ ಬಂಧಿ ಕೈದಿಗಳ ಪುನರ್ವಸತಿ, ಹೆಚ್ಚಿಸಿರುವ ಕೂಲಿ ದರ, ಹಾಗೂ ಕಾರಾಗೃಹ ಅಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ ತಂದಿರುವ ಬಗ್ಗೆ ಬಂಧಿಗಳ ಗಮನ ಸೆಳೆದರು.
ಕಾರಾಗೃಹವನ್ನು ಸುಧಾರಣೆಯ ಹಾಗೂ ಮನ ಪರಿವರ್ತನೆಯ ತಾಣವೆಂದು, ಸ್ವೀಕರಿಸಿ ಹಾಗೂ ಇಲ್ಲಿನ ಹೊರತಾಗಿಯೂ ಬದುಕು ಇದೆ ಎಂಬ ವಾಸ್ತವವನ್ನು ಅರಿತುಕೊಳ್ಳಿ ಎಂದು ಹೇಳಿದ ಸಚಿವರು ಎಲ್ಲರಿಗೂ ಶುಭ ಹಾರೈಸಿದರು.


ಕಾರಾಗೃಹದಲ್ಲಿರುವ, ಕೈ ಮಗ್ಗ ಘಟಕ, ಕೌಶಲ್ಯ ಅಭಿವೃದ್ಧಿ ಕೇಂದ್ರ, ಹೊಲಿಗೆ ತರಬೇತಿ ಘಟಕಕ್ಕೂ ಭೇಟಿ ನೀಡಿದ ಸಚಿವರು, ಸಜಾ ಬಂಧಿ ಕೈದಿಗಳ ಜತೆ ಸಂಭಾಷಣೆ ನಡೆಸಿದರು.
ಕಾರಾಗೃಹದ ಒಳಗಿರುವ, ಕೈದಿಗಳ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವರನ್ನು, ಕೈದಿಗಳು ಸುಶ್ರಾವ್ಯವಾಗಿ ಹಾಡುವುದರ ಮೂಲಕ ಬರ ಮಾಡಿಕೊಂಡರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾನಿಲಯದ, ಕೇಂದ್ರ ಕಾರಾಗೃಹದ ಘಟಕವನ್ನು ವೀಕ್ಷಿಸಿದರು. ಸಜಾ ಬಂಧಿ ಕೈದಿಗಳು ಮನವಿ ಪತ್ರವನ್ನು ಸಚಿವರು ಸ್ವೀಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.


ಮಹಿಳಾ ಸಜಾಬಂಧಿಗಳನ್ನು ಸಹ ಸಚಿವರು ಭೇಟಿ ನೀಡಿ ಅವರ ಅಹವಾಲುಗಳನ್ನು ಆಲಿಸಿದರು.
ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಸಚಿವರು, ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಸೂಚಿಸಿದರು.
ನಂತರ ಜೈಲು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಆರಗ ಜ್ಞಾನೇಂದ್ರ, ಜೈಲಿನ ಒಳಗಡೆ ಮಾದಕ ವಸ್ತುಗಳು, ಮೊಬೈಲ್ ಫೋನ್ ಬಳಕೆ ವಿರುದ್ಧ ತೀವ್ರ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.


ಮೈಸೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ ಸಿ ದಿವ್ಯಶ್ರೀ ಸೇರಿದಂತೆ, ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.

Join Whatsapp
Exit mobile version