Home ಟಾಪ್ ಸುದ್ದಿಗಳು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯಲು ನಿರ್ಧಾರ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯಲು ನಿರ್ಧಾರ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗೂ ಗೋಶಾಲೆ ತೆರೆಯಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸಂಪುಟ ನಿರ್ಣಯಗಳ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗದಗ ಪಶುವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 50 ಕೋಟಿಗೆ ಹೆಚ್ಚುವರಿ 30 ಕೋಟಿ ಅನುದಾನ ನೀಡೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಬೆಳೆ ಸರ್ವೆಗೆ ಹೊಸ ಆ್ಯಪ್ ರಚನೆಗೆ ಒಪ್ಪಿಗೆ ನೀಡಲಾಗಿದೆ. ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಫೆಬ್ರವರಿ 9 ರಿಂದ 12ರವರೆಗೆ ಮೂರು ದಿನ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಇನ್ವೆಸ್ಟ್ ಕರ್ನಾಟಕ 22-22 ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಆಕ್ಸಿಜನ್ ಮ್ಯಾನ್ಯುಪ್ಯಾಕ್ಚರಿಂಗ್ ಘಟಕ ನಿರ್ಮಾಣಕ್ಕೆ ಅನುಮೋದಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ 9 ಘಟಕಗಳು ಇವೆ. 800 ಮೆಟ್ರಿಕ್ ಅನ್ ಕ್ಯಪಾಸಿಟಿ ಇದೆ. ಇದನ್ನ ಹೆಚ್ಚಿಸುವ ಬಗ್ಗೆ ಸಂಪುಟ ನಿರ್ಧರಿಸಲಾಗಿದೆ. 25% ಕ್ಯಾಪಿಟಲ್ ಸಬ್ಸಿಡಿಯನ್ನು ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಜೆಒಸಿ ಪಿಯುಸಿ ತತ್ಸಮಾನವಾದ ಶಿಕ್ಷಣ ಎಂದು ಪರಿಗಣಿಸಲಾಗುವುದು. ದೇವದುರ್ಗ ಇಂಜಿನಿಯರಿಂಗ್ ಕಾಲೇಜ್ ಗೆ 58 ಕೋಟಿ ರೂ. ಹಣ ಬಿಡುಗಡೆಗೆ ನಿರ್ಧರಿಸಲಾಗಿದೆ. ಕೆ.ಎಸ್ ಎಫ್.ಸಿ ಕಟ್ ಬಾಕಿ ಆಗಿರುವವರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಲಾಗುವುದು. 15000 ಜನರು ಈಗಾಗಲೇ ಅನುಕೂಲ ಪಡೆದಿದ್ದಾರೆ. ಇನ್ನೂ 2-3.ಸಾವಿರ ಜನರು ಅನುಕೂಲ ಪಡೆಯಲಿದ್ದಾರೆ ಎಂದು ಹೇಳಿದರು.

Join Whatsapp
Exit mobile version