Home ಟಾಪ್ ಸುದ್ದಿಗಳು ನೈಟ್ ಕರ್ಪ್ಯೂ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ನೈಟ್ ಕರ್ಪ್ಯೂ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ : ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾದಿಂದಾಗಿ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಕರ್ಪ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಪ್ಯೂ ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸಿದರೆ ಅಂತಹ ವಾಹನಗಳನ್ನು ಸೀಝ್ ಮಾಡಲಾಗುವುದು ಮತ್ತು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಲ್ಯಾಣ ಮಂಟಪ, ಸಭಾ ಭವನಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಜನರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪೊಲೀಸರು ಏಕಾಏಕಿ ಲಾಠಿ ಕೈಗೆತ್ತಿಕೊಳ್ಳುವುದಿಲ್ಲ. ಆದರೆ ಕರ್ಪ್ಯೂ ವೇಳೆ ಕ್ರಮ ಕೈಗೊಳ್ಳಲಾಗುವುದು ಎಂದರು.

Join Whatsapp
Exit mobile version