ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಇತರೆ ಪ್ರಕರಣಗಳನ್ನು ಮರು ಪರಿಶೀಲಿಸಿ ಹಿಂಪಡೆಯುವಂತೆ ಸೂಚಿಸಿದ ಗೃಹ ಸಚಿವ

Prasthutha|

ಬೆಂಗಳೂರು: ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್, ತನ್ವೀರ್ ಸೇಠ್ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

- Advertisement -


ಬೆಂಗಳೂರು ನಗರದ ಡಿಜೆ ಹಳ್ಳಿ-ಕೆಜೆ ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರೆ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಆ ಮೊಕದ್ದಮೆಗಳನ್ನು ಮರು ಪರಿಶೀಲಿಸಿ, ನಿಯಮನುಸಾರವಾಗಿ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

Join Whatsapp