ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ರಕ್ಷಣೆ ನೀಡುವಂತೆ ಡಿಜಿ-ಐಜಿಪಿಗೆ ಸೂಚನೆ ನೀಡಿದ ಗೃಹ ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಹದಿನೈದಕ್ಕೂ ಹೆಚ್ಚು ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ ಸೂಕ್ತ ಕ್ರಮಕೈಗೊಳ್ಳಯವಂತೆ ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ʼʼಹಲವು ಲೇಖಕರು, ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ನನ್ನ ಭೇಟಿಗೆ ಸಾಹಿತಿಗಳ ನಿಯೋಗ ಸಮಯ ಕೇಳಿದೆ. ಈ ಹಿಂದೆ ಹಲವು ಕಹಿ ಘಟನೆಗಳು ನಡೆದಿವೆ. ಸಾಹಿತಿ, ಬುದ್ಧಿಜೀವಿಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಡಿಜಿ-ಐಜಿಪಿ, ಬೆಂಗಳೂರು ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Join Whatsapp