Home ಟಾಪ್ ಸುದ್ದಿಗಳು ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ರಕ್ಷಣೆ ನೀಡುವಂತೆ ಡಿಜಿ-ಐಜಿಪಿಗೆ ಸೂಚನೆ ನೀಡಿದ ಗೃಹ ಸಚಿವ ಪರಮೇಶ್ವರ್

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ರಕ್ಷಣೆ ನೀಡುವಂತೆ ಡಿಜಿ-ಐಜಿಪಿಗೆ ಸೂಚನೆ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಹದಿನೈದಕ್ಕೂ ಹೆಚ್ಚು ಸಾಹಿತಿಗಳಿಗೆ ಜೀವ ಬೆದರಿಕೆ ಹಿನ್ನೆಲೆ ಸೂಕ್ತ ಕ್ರಮಕೈಗೊಳ್ಳಯವಂತೆ ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ʼʼಹಲವು ಲೇಖಕರು, ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ನನ್ನ ಭೇಟಿಗೆ ಸಾಹಿತಿಗಳ ನಿಯೋಗ ಸಮಯ ಕೇಳಿದೆ. ಈ ಹಿಂದೆ ಹಲವು ಕಹಿ ಘಟನೆಗಳು ನಡೆದಿವೆ. ಸಾಹಿತಿ, ಬುದ್ಧಿಜೀವಿಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಡಿಜಿ-ಐಜಿಪಿ, ಬೆಂಗಳೂರು ಪೊಲೀಸ್ ಕಮಿಷನರ್ಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Join Whatsapp
Exit mobile version