ಬೆಂಗಳೂರು: ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿ ಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯ ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದೂ ಇರಬಹುದು, ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು.