ಮೂವರು ಡಿಸಿಎಂ ನೇಮಕ ಗಾಳಿ ಸುದ್ದಿ: ಗೃಹ ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿ ಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

- Advertisement -

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯ ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದೂ ಇರಬಹುದು, ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು.

Join Whatsapp