NIA ದಾಳಿಯ ಬೆನ್ನಲ್ಲೇ ಅಧಿಕಾರಿಗಳ ಜೊತೆ ಮಹತ್ವದ ಸಭೆ ಕರೆ ಗೃಹ ಸಚಿವ ಅಮಿತ್ ಶಾ

Prasthutha|

ನವದೆಹಲಿ: PFI ಸಂಘಟನೆಯನ್ನು ಗುರಿಯಾಗಿಸಿ ದೇಶದ ಹಲವೆಡೆ NIA ನಡೆಸಿದ ದಾಳಿ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಉನ್ನತ ಅಧಿಕಾರಿಗಳು ಜೊತೆ ಮಹತ್ವದ ಸಭೆ ಕರೆದಿದ್ದಾರೆ.

- Advertisement -

ಈ ವೇಳೆ PFI ಗೆ ಸಂಬಂಧಿಸಿದ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಮತ್ತು ವಶಕ್ಕೆ ಪಡೆದವರ ವಿರುದ್ಧ ಕ್ರಮಗಳನ್ನು ಜರುಗಿಸುವ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು NIA ಮಹಾ ನಿರ್ದೇಶಕ ದಿನಕರ್ ಗುಪ್ತಾ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

- Advertisement -

Join Whatsapp